Webdunia - Bharat's app for daily news and videos

Install App

"ಸಿಎಂ ಸ್ಥಾನ ಉಳಿಸಿಕೊಳ್ಳಲು ಬೊಮ್ಮಾಯಿ RSS ಹೊಗಳುತ್ತಿದ್ದಾರೆ" : ಸಿದ್ದರಾಮಯ್ಯ

Webdunia
ಶನಿವಾರ, 16 ಅಕ್ಟೋಬರ್ 2021 (13:27 IST)
ಹುಬ್ಬಳ್ಳಿ, ಅ.16 : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಉಳಿಸಿ ಕೊಳ್ಳಲು ಆರ್‍ಎಸ್‍ಎಸ್‍ನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ನಗರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಮೂಲತಃ ಆರ್ಎಸ್ಎಸ್ ಅಲ್ಲ. ಅಲ್ಲಿ ಹೋಗಿ ಸೇರಿ ಕೊಂಡಿದ್ದಾರೆ. ಸಿಎಂ ಸ್ಥಾನ ಉಳಿಸಿ ಕೊಳ್ಳಬೇಕೆಂದರೆ ಆರ್ಎಸ್ಎಸ್ ಹೊಗಳಲೇ ಬೇಕಾದ ಅನಿವಾರ್ಯತೆಯಿದೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಅಪ್ಪಟ ಸುಳ್ಳು. ಅದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಯಡಿಯೂರಪ್ಪ ಆರೆಸ್ಸೆಸ್ನಿಂದ ಬಂದವರು. ನಾನು ಅವರು ಸೇರಲು ಸಾಧ್ಯವೇ ಇಲ್ಲ ಎಂದರು.
ಅಲ್ಲದೆ, ರಾಜಕೀಯವಾಗಿ ಆರೆಸ್ಸೆಸ್ ವಿರುದ್ಧ ಬೆಳೆದವನು ನಾನು. ಅಕಾರದಲ್ಲಿದ್ದವರ ಮನೆ ಬಾಗಿಲಿಗೆ ನಾ ಎಂದೂ ಹೋಗಿಲ್ಲ. ಕಾಂಗ್ರೆಸ್ ಜಾತ್ಯಾತೀತ, ಪ್ರಜಾಪ್ರಭುತ್ವಕ್ಕೆ ಬದ್ಧವಾಗಿರುವ ಪಕ್ಷ. ಬಿಜೆಪಿ ಇದಕ್ಕೆ ವಿರುದ್ಧವಾದ ಪಕ್ಷ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments