Select Your Language

Notifications

webdunia
webdunia
webdunia
webdunia

Booker Prize: ಪ್ರಶಸ್ತಿಯೊಂದಿಗೆ ಬರೋಬ್ಬರಿ ₹57.28 ಲಕ್ಷ ಬಹುಮಾನ ಬಾಚಿಕೊಂಡ ಸಾಹಿತಿ ಬಾನು ಮುಷ್ತಾಕ್‌

International Booker Prize

Sampriya

ಬೆಂಗಳೂರು , ಬುಧವಾರ, 21 ಮೇ 2025 (14:23 IST)
Photo Courtesy X
ಬೆಂಗಳೂರು:  ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಅಂದಾಜು ₹ 57.28 ಲಕ್ಷ (50 ಸಾವಿರ ಪೌಂಡ್‌) ನಗದು ಪಡೆದಿದ್ದಾರೆ.

ಬಾನು ಮುಷ್ತಾಕ್ ಅವರ, ಸಣ್ಣ ಕತೆಗಳ ಅನುವಾದಿತ ಸಂಕಲನ 'ಹಾರ್ಟ್ ಲ್ಯಾಂಪ್'ಗೆ ಈ ಪ್ರಶಸ್ತಿ ಲಭಿಸಿದೆ. ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ. ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್‌, ಇಟಾಲಿಯನ್‌ ಹಾಗೂ ಡ್ಯಾನಿಷ್‌ ಭಾಷೆಯ ತಲಾ ಒಂದು ಕೃತಿ 'ಶಾರ್ಟ್‌ ಲಿಸ್ಟ್‌'ನಲ್ಲಿದ್ದವು. ಆದರೆ, ಅಂತಿಮವಾಗಿ ಕನ್ನಡದ ಸಾಹಿತಿಗೆ ಪ್ರತಿಷ್ಠಿತ ಪ್ರಶಸ್ತಿ ಒಲಿದಿದೆ.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ಕೊಡ್ತೀವಿ: ಆರ್.ಅಶೋಕ್