Select Your Language

Notifications

webdunia
webdunia
webdunia
webdunia

ಜುಲೈ 15ರಿಂದ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್

Booster dose for above 18 years from July 15
ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಜುಲೈ 15ರಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದಾಗಿ ಘೋಷಿಸಿದೆ. ಕೋವಿಡ್-19 ಬೂಸ್ಟರ್ ಡೋಸ್ ವಿತರಣೆಗೆ ಉತ್ತೇಜನ ನೀಡುವ ಉದ್ದೇಶದ ಹಿನ್ನೆಲೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಉಚಿತ ಬೂಸ್ಟರ್ ಡೋಸ್ ಲಸಿಕೆ ವಿತರಣೆಯ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. ಭಾರತವು ಸ್ವಾತಂತ್ರ್ಯೋತ್ಸವದ 75ನೇ ವರ್ಷದಲ್ಲಿ ಇರುವ ಹಿನ್ನೆಲೆ ಈ ಸುಸಂದರ್ಭವನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ಜುಲೈ 15 ರಿಂದ ಮುಂದಿನ 75 ದಿನಗಳವರೆಗೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋವಿಡ್-19 ಬೂಸ್ಟರ್ ಡೋಸ್ ಅನ್ನು ನೀಡಲಾಗುವುದು ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಸಾಹಸಕ್ಕೆ ಕೈಹಾಕಿದ ಅಂಚೆ ವಿಭಾಗ