ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿ ತಲಪಾಡಿ ಗಡಿ ಬಂದ್ ಮಾಡಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೇರಳ ಭಾಗದ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಕೇರಳಿಗರು ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟಿಸಿದರು.
ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಕಿ.ಮೀ ಗಟ್ಟಲೇ ಸಾಲುಗಟ್ಟಿ ನಿಂತಿದೆ. ಆದರೂ ಪ್ರತಿಭಟನೆ ಮಧ್ಯೆಯೂ ಪ್ರತಾಪ್ ರೆಡ್ಡಿ ಗಡಿ ಪರಿಶೀಲನೆ ನಡೆಸಿ ತೆರಳಿದರು.