Select Your Language

Notifications

webdunia
webdunia
webdunia
webdunia

ಭಾರತದಲ್ಲಿನ ಮಾನವಹಕ್ಕುಗಳ ಬಗ್ಗೆ ಬೇಸರ

Bored about human rights in India
bangalore , ಬುಧವಾರ, 13 ಏಪ್ರಿಲ್ 2022 (20:15 IST)
ಭಾರತದಲ್ಲಿ ಆಗುತ್ತಿರುವ ಮಾನವಹಕ್ಕುಗಳ ಉಲ್ಲಂಘನೆಯನ್ನು ಗಮನಿಸುತ್ತಿದ್ದೇವೆ ಎಂದು ಅಮೆರಿಕದ ಸಚಿವ ಆಂಟೋನಿ ಬ್ಲಿಂಕೆನ್ ಹೇಳಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಅಮೆರಿಕ ಸಚಿವರು 2+2 ಮಾತುಕತೆ ನಡೆದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಬ್ಲಿಂಕೆನ್ ಈ ಹೇಳಿಕೆ ನೀಡಿದ್ದಾರೆ. ಸರ್ಕಾರ, ಕೆಲ ಪೊಲೀಸ್​​ ಅಧಿಕಾರಿಗಳಿಂದ ಹೆಚ್ಚುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಗಮನಿಸುತ್ತಿದ್ದೇವೆ ಎಂದಷ್ಟೇ ಹೇಳಿದ್ದು, ಬೇರೆ ವಿವರಗಳನ್ನು ಬಹಿರಂಗಪಡಿಸಿಲ್ಲ. ನಾವು ಮಾನವ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬದ್ಧರಾಗಿದ್ದೇವೆ. ಹಂಚಿಕೊಂಡಿರುವ ಮೌಲ್ಯಗಳ ವಿಷಯದಲ್ಲಿ ಭಾರತೀಯರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತೇವೆ ಎಂದು ಬ್ಲಿಂಕೆನ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಚಂಡಮಾರುತಕ್ಕೆ 58 ಜನ ಸಾವು