Daily Horoscope

Select Your Language

Notifications

webdunia
webdunia
webdunia
webdunia

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

Karnataka Governer Thavarchandh Gehlot
ಬೆಂಗಳೂರು: ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ರಾಜ್ಯಪಾಲರಿಂದ ಅನುಮೋದನೆಗಾಗಿ ಕಳುಹಿಸಿದ್ದ ಒಟ್ಟು 22 ಮಸೂದೆಗಳ ಪೈಕಿ 19ಕ್ಕೆ ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. 

ವಿಪಕ್ಷಗಳಿಂದ ಭಾರೀ ವಿರೋಧಕ್ಕೆ ಕಾರಣವಾದ ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಸಹಿ ಹಾಕದಿರುವುದರಿಂದ ಇನ್ನೂ ಪರಿಶೀಲನೆಯಲ್ಲಿದೆ.

ಈ ಬಗ್ಗೆ ಲೋಕಭವನ ಶುಕ್ರವಾರ ಮಾಹಿತಿ ಹಂಚಿಕೊಂಡು, ಎರಡು ಮಸೂದೆಗಳಾದ ಕರ್ನಾಟಕ ಪರಿಶಿಷ್ಟ ಜಾತಿ(SC ಒಳ ಮೀಸಲಾತಿ) ಮಸೂದೆ ಮತ್ತು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳನ್ನು ಹೆಚ್ಚಿನ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ  ಎಂದು ತಿಳಿಸಿದೆ. 

"22 ಮಸೂದೆಗಳಲ್ಲಿ 19 ಮಸೂದೆಗಳನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲು ಕಳುಹಿಸಲಾಗಿದೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ಮಸೂದೆಗೆ ತೀವ್ರ ವಿರೋಧ ವ್ಯಕ್ತಿಪಡಿಸಿದ್ದ ಪ್ರತಿಪಕ್ಷ ಬಿಜೆಪಿ, ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಮನವಿ ಮಾಡಿತ್ತು.

ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿಗಳಿಗೂ ದ್ವೇಷ ಭಾಷಣ ಮಸೂದೆ ಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ