ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನ ಮಾಡಲು ತಿರಸ್ಕರಿಸಿದ್ದರು. ಇದೀಗ ರೈತರ ಸಾಲ ಮನ್ನಾ ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಒಂದು ವೇಳೆ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ. ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲು ಪಕ್ಷ ಬದ್ಧವಾಗಿದೆ ಎಂದರು.
ನಾಳೆ ನಂಜನಗೂಡು, ಗುಂಡ್ಲುಪೇಟೆಯಲ್ಲಿ ಪ್ರವಾಸ ಮಾಡಿ ಜನಾಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.