Select Your Language

Notifications

webdunia
webdunia
webdunia
Friday, 4 April 2025
webdunia

ಕಲುಷಿತ ನೀರು ಸೇವಿಸಿ ಬಾಲಕ ಸಾವು! 30ಕ್ಕೂ ಹೆಚ್ಚು ಜನ ಅಸ್ವಸ್ಥ

ಕಲುಷಿತ ನೀರು
ರಾಯಚೂರು , ಶನಿವಾರ, 27 ಮೇ 2023 (06:58 IST)
ರಾಯಚೂರು : ಕಲುಷಿತ ನೀರು ಸೇವಿಸಿ ಬಾಲಕ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. 30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
 
ನೀರು ಸರಬರಾಜು ಮಾಡುವ ಪೈಪ್ ಲೈನ್ಗೆ ಚರಂಡಿ ನೀರು ಸೇರುತ್ತಿದ್ದು ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು ಅಗತ್ಯ ವೈದ್ಯಕೀಯ ಸಲಕರಣೆ, ಔಷಧಿ ವ್ಯವಸ್ಥೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್‌ಗಾಂಧಿ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್ ಅನುಮತಿ