ಹೆಬ್ಬಾವಿನ ಜತೆಯಲ್ಲಿ ಸೆಣಸಾಡಿ ಗೆದ್ದ ಬಾಲಕ

Webdunia
ಗುರುವಾರ, 6 ಅಕ್ಟೋಬರ್ 2016 (10:57 IST)
ಪುಟ್ಟ ಬಾಲಕನೋರ್ವ ಹೆಬ್ಬಾವಿನೊಂದಿಗೆ ಸೆಣಸಾಡಿ ಗೆದ್ದ ಅಪರೂಪದ ಸಾಹಸಗಾಥೆ ಮಂಗಳೂರಿನಲ್ಲಿ ನಡೆದಿದೆ.

ಬಂಟ್ವಾಳ ತಾಲ್ಲೂಕಿನ ಸಜಿಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ದೈತ್ಯ ಹಾವಿನ ಜತೆ ಕಾದಾಡಿದ ಬಾಲಕನನ್ನು 
11 ವರ್ಷದ ವೈಶಾಖ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕಾಲುದಾರಿಯಲ್ಲಿ ಅಜ್ಜಿಮನೆ ಕಡೆ ನಡೆದು ಹೋಗುತ್ತಿದ್ದ ಬಾಲಕನ ಮೇಲೆ ಪೊದೆಯಲ್ಲಿದ್ದ ಹೆಬ್ಬಾವೊಂದು ದಾಳಿ ಮಾಡಿದೆ.ಬಾಲಕನ ಕೈ ಹಿಡಿದು ನುಂಗಲು ಪ್ರಾರಂಭಿಸಿದೆ. ಪ್ರಾಣಾಪಾಯಕ್ಕೆ ಸಿಲುಕಿದ ಬಾಲಕ ಸಹಾಯಕ್ಕಾಗಿ ಕೂಗಿಕೊಂಡಿದ್ದಾನೆ. ಆದರೆ ಅದು ನಿರ್ಜನ ಪ್ರದೇಶವಾಗಿದ್ದರಿಂದ ಯಾರೂ ಆತನ ಸಹಾಯಕ್ಕೆ ಬಂದಿಲ್ಲ. ಸಮಯಪ್ರಜ್ಞೆ ಮೆರೆದ ಬಾಲಕ ತಕ್ಷಣ ಒಂದು ಚೂಪಾದ ಕಲ್ಲನ್ನೆತ್ತಿಕೊಂಡ ಬಾಲಕ ಹಾವಿನ ಕಣ್ಣಿಗೆ ಅನೇಕ ಬಾರಿ ಜಜ್ಜಿದ್ದಾನೆ. 
 
ಕಣ್ಣಿಗೆ ಬಲವಾದ ನೋವಾಗಿದ್ದರಿಂದ ಹಾವು ಬಾಲಕನನ್ನು ಬಿಟ್ಟು ಪೊದೆಯೊಳಕ್ಕೆ ಹೋಗಿದೆ. 
 
ಹೆಬ್ಬಾವಿಗೆ ವಿಷವಿಲ್ಲದಿದ್ದುದರಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಕೈಯ್ಯಿಗೆ ಗಾಯಗೊಂಡಿರುವ ಬಾಲಕನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments