Select Your Language

Notifications

webdunia
webdunia
webdunia
webdunia

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿಆರ್‌ ಪಾಟೀಲ್‌ಗೆ ಹೊಸ ಜವಾಬ್ದಾರಿ

CM Political Advisor MLA BR Patil,  Vice-Chairman of Planning Commission, MLA BR Patil Politics

Sampriya

ಬೆಂಗಳೂರು , ಸೋಮವಾರ, 17 ಫೆಬ್ರವರಿ 2025 (17:41 IST)
Photo Courtesy X
ಬೆಂಗಳೂರು: ಈಚೆಗೆ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಆಪ್ತ, ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್​ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಬಿಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.

ರಾಜ್ಯ ಸರ್ಕಾರದ ಆದೇಶದಂತೆ ಆಳಂದ ಶಾಸಕ ಬಿ ಆರ್ ಪಾಟೀಲ್ ಅವರನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷರಾಗಿ ನೇಮಕ ಮಾಡುವುದರ ಜೊತೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಿದೆ.

ಫೆಬ್ರವರಿ 1 ರಂದು ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದು ಬಿಆರ್ ಪಾಟೀಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದರು.

ಆದರೆ ರಾಜೀನಾಮೆ ನೀಡಿರುವ ಉದ್ದೇಶವನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.ಆದರೆ ಬಿಆರ್ ಪಾಟೀಲ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿತ್ತು. 


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವಿವಿಗಳಿಗೆ ಬೀಗ, ಇರೋ ವಿವಿಗಳಿಗೆ ಅನುದಾನವಿಲ್ಲ: ಸರ್ಕಾರದ ಖಜಾನೆ ಖಾಲಿ!