Publish Date: Wed, 20 Oct 2021 (20:45 IST)
Updated Date: Wed, 20 Oct 2021 (20:47 IST)
ಲ್ಲಾ ಸಹಕಾರ ಬ್ಯಾಂಕ್ನಲ್ಲಿ(ಡಿಸಿಸಿ) ಬ್ರಹ್ಮಂಡ ಭ್ರಷ್ಟಾಚಾರ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ನಲ್ಲಿ ಅಧ್ಯಕ್ಷ ಗೋಪಾಲಗೌಡ ನಾಮಕಾವಸ್ತೆ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್ನಲ್ಲಿ ಮಾಜಿ ಸ್ಪೀಕರ್ ಹಾಗೂ ಹಾಲಿ ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಬ್ಯಾಂಕ್ನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜರಬಂಡನಹಳ್ಳಿ ಗ್ರಾಮದಲ್ಲಿ ಸ್ಥಳಿಯ ವಿಎಸ್ಎಸ್ಎನ್ ಸಂಸ್ಥೆಯಿಂದ ರೈತರಿಗೆ ಸಾಲ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ತನಿಖೆ ನಡೆದರೆ ರಮೇಶ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೊಗುತ್ತಾರೆ ಎಂಬ ಕಾರಣಕ್ಕೆ ಬ್ಯಾಂಕ್ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದ್ದಾರೆ.