Webdunia - Bharat's app for daily news and videos

Install App

ಬ್ರಹ್ಮಾವರ: ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಗೋಡೆಗೆ ತಲೆ ಬಡಿದುಕೊಂಡು ಸಾವು

Sampriya
ಭಾನುವಾರ, 10 ನವೆಂಬರ್ 2024 (15:12 IST)
ಉಡುಪಿ: ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ಕೇರಳದ ಕೊಲ್ಲಂ ಜಿಲ್ಲೆಯ ಬಿಜು ಮೋಹನ್‌ (45) ಎಂದು ಗುರುತಿಸಲಾಗಿದೆ.

ಚೇರ್ಕಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಕಿರುಕುಳ ನೀಡುತ್ತಿರುವುದಾಗಿ ಬ್ರಹ್ಮಾವರ ಪೊಲೀಸ್‌ ಠಾಣೆಗೆ ಶನಿವಾರ ಕರೆ ಬಂದಿತ್ತು. ಅದರಂತೆ ಪೊಲೀಸರು ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕೆ. ತಿಳಿಸಿದ್ದಾರೆ.

ಪೊಲೀಸ್‌ ಲಾಕಪ್‌ನಲ್ಲಿದ್ದ ವ್ಯಕ್ತಿಯು ರಾತ್ರಿ 3.45ರ ಸುಮಾರಿಗೆ ಗೋಡೆಗೆ ತಲೆಯನ್ನು ಬಡಿದುಕೊಂಡಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಆತನನ್ನು ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದೂ ವಿವರಿಸಿದರು.

ಕೂಲಿ ಕೆಲಸಕ್ಕಾಗಿ ಬಿಜು ಮೋಹನ್ ಬ್ರಹ್ಮಾವರಕ್ಕೆ ಬಂದಿದ್ದರು. ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದೇವೆ. ಅವರು ಏನು ದೂರು ನೀಡುತ್ತಾರೆ ಎಂಬುದನ್ನು ಆಧರಿಸಿ ಮುಂದಿನ ತನಿಖೆ ನಡೆಯಲಿದೆ. ಇದು ಲಾಕಪ್‌ ಡೆತ್ ಪ್ರಕರಣವಾಗಿರುವುದರಿಂದ ಸಿಐಡಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments