Select Your Language

Notifications

webdunia
webdunia
webdunia
webdunia

ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ

Brake for bike traffic at night
Shivamogga , ಮಂಗಳವಾರ, 16 ಆಗಸ್ಟ್ 2022 (18:01 IST)
ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ರಾತ್ರಿ ಹೊತ್ತು ಬೈಕ್‌ ಸಂಚಾರ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ ಬೈಕ್‌ ನಲ್ಲಿ ಯುವಕರು ಇಬ್ಬರು ಸಂಚರಿಸದಂತೆ ಕ್ರಮ ಕೈಗೊಳ್ಳಲಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಜಬೀವುಲ್ಲಾ, ರೆಹಮಾನ್, ನದೀಂ,ರೆಹಮಾನ್ ಬಂಧಿತ ಆರೋಪಿಗಳು. ಆರೋಪಿ ಜಬೀವುಲ್ಲಾ, ಪ್ರೇಮ್ ಸಿಂಗ್ ಗೆ ಚಾಕು ಇರಿದಿದ್ದ. ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೈಕ್‌ ನಲ್ಲಿ ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮಹಿಳೆಯರಿಗೆ ಮಾತ್ರ ಹಿಂಬದಿ ಕೂರಲು ಅವಕಾಶ ನೀಡಲಾಗಿದೆ.  ನಿಯಮ ಉಲ್ಲಂಘನೆ ಮಾಡದ್ರೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎಚ್ಚರಿಕೆ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು