Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಸಿಬಿಐ ಗೆ ಬೀಳುತ್ತಾ ಮೂಗುದಾರ..?

ಸಿಬಿಐ
ದಾವಣಗೆರೆ , ಶನಿವಾರ, 17 ನವೆಂಬರ್ 2018 (16:52 IST)
ಸಿಬಿಐ ತನಿಖೆ ನಡೆಸುವುದಕ್ಕೆ ರಾಜ್ಯದಲ್ಲಿ ಜಾರಿಯಲ್ಲಿದ್ದ ಇದ್ದ ಮುಕ್ತ ಸಮ್ಮತಿಗೆ ಬ್ರೇಕ್ ಬೀಳುವ ಸಮಯ ಹತ್ತಿರವಾದಂತಿದೆ.

ಈಗಾಗಲೇ ಆಂಧ್ರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಿಬಿಐಗೆ ಇದ್ದ ಮುಕ್ತ ಸಮ್ಮತಿಗೆ ಕಡಿವಾಣ ಹಾಕಲಾಗಿದೆ. ಅದೇ ಮಾದರಿಯನ್ನು ಕರ್ನಾಟಕ ಅನುಸರಿಸಲಿದೆ ಎನ್ನಲಾಗುತ್ತಿದೆ.

ಸಿಬಿಐ ದುರ್ಬಳಕೆ ಆಗುತ್ತದೆ ಎಂದು ಆರೋಪಿಸಿ ಸಿಬಿಐ ತನಿಖೆ ನಡೆಸುವುದಕ್ಕೆ ಇದ್ದ ಮುಕ್ತ ಸಮ್ಮತಿಯನ್ನು ಮಮತಾ ಬ್ಯಾನರ್ಜಿ ವಾಪಸ್ ಪಡೆದ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ಸಿಬಿಐ ಮುಕ್ತ ತನಿಖೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸಿಬಿಐ ತನಿಖೆ ನಡೆಸುವುದಕ್ಕೆ ಇದ್ದ ಮುಕ್ತ ತನಿಖೆ ವಾಪಸ್ ಪಡೆದ ಹಿನ್ನಲೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದಿದ್ದಾರೆ.  




Share this Story:

Follow Webdunia kannada

ಮುಂದಿನ ಸುದ್ದಿ

ಎಐಸಿಸಿ ಅಧ್ಯಕ್ಷರ ನೇಮಕ ವಿಚಾರ; ಮೋದಿ ಹೇಳಿಕೆಗೆ ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದೇನು?