Select Your Language

Notifications

webdunia
webdunia
webdunia
webdunia

ಶ್ರೀರಂಗಪಟ್ಟಣದಲ್ಲಿ ಅಕ್ರಮ ಗಣಿಗಾರಿಕೆಗೆ ಬ್ರೇಕ್

ಶ್ರೀರಂಗಪಟ್ಟಣದಲ್ಲಿ  ಅಕ್ರಮ ಗಣಿಗಾರಿಕೆಗೆ ಬ್ರೇಕ್
ಮಂಡ್ಯ , ಮಂಗಳವಾರ, 10 ಸೆಪ್ಟಂಬರ್ 2019 (11:07 IST)
ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಸುತ್ತಮುತ್ತಲ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಒಂದು ತಿಂಗಳುಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.




ಈ ಪ್ರದೇಶಗಳಲ್ಲಿ ಹೆಚ್ಚಿನ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದ ಪರಿಸರ ನಾಶವಾಗುವುದರ ಜೊತೆಗೆ ಸಾರ್ವಜನಿಕರಿಗೂ ಸಾಕಷ್ಟು ತೊಂದರೆ ಆಗುತ್ತಿತ್ತು. ಆದ್ದರಿಂದ ಇದರಿಂದ  ಬೇಸತ್ತ ಜನರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದೂರು ನೀಡಿದ ಹಿನ್ನಲೆ ಸೆ. 09 ರಿಂದ ಅ. 08ರವರೆಗೆ ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡುವಂತೆ ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಅವರು ಆದೇಶಿಸಿದ್ದಾರೆ.


ಜಕ್ಕನಹಳ್ಳಿ, ಚನ್ನನಕೆರೆ, ಕಾಳೇನಹಳ್ಳಿ, ಗಣಂಗೂರು, ಸಿದ್ದಾಪುರ, ಮುಂಡುಗದೊರೆ, ಹಂಗರಹಳ್ಳಿ, ಗೌಡಹಳ್ಳಿ, ಟಿ.ಎಂ. ಹೊಸೂರು, ಕೋಡಿಶೆಟ್ಟಿಪುರ, ಶ್ರೀರಾಂಪುರ, ನೀಲನಕೊಪ್ಪಲು ಸೇರಿದಂತೆ ಹಲವು ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ