Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ಲಂಚ ಪ್ರಕರಣದ ಸಂಕಷ್ಟ

Krishnaveni K
ಗುರುವಾರ, 22 ಫೆಬ್ರವರಿ 2024 (11:21 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಸಿಎಂ ಸಿದ್ದರಾಮಯ್ಯಗೆ ಲಂಚ ಪ್ರಕರಣವೊಂದು ಸುತ್ತಿಕೊಳ್ಳುತ್ತಿದೆ.

ಹಿಂದಿನ ಬಾರಿ ಅಧಿಕಾರದಲ್ಲಿದ್ದಾಗ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಲಾಗಿದ್ದು ಬಿ ರಿಪೋರ್ಟ್ ನ್ನು ಜನಪ್ರತಿನಿಧಿಗಳ ನ್ಯಾಯಾಲ ತಿರಸ್ಕರಿಸಿದೆ. ಮರು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ.

ಹುದ್ದೆಯೊಂದಕ್ಕೆ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಲಂಚ ಪಡೆದಿದ್ದರು ಎಂದು ಬಿಜೆಪಿ ನಾಯಕ ಎನ್ ಆರ್ ರಮೇಶ್ ದೂರು ನೀಡಿದ್ದರು. 2013-18 ರ ಅವಧಿಯಲ್ಲಿ ಅಧಿಕಾರದಲ್ಲಿದ್ದಾಗ ಎಲ್ ವಿವೇಕಾನಂದ ಎಂಬವರಿಂದ 1.30 ಕೋಟಿ ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಲಂಚ ಪಡೆದು ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆದು ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು, ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಪುರಾವೆ ಇಲ್ಲ ಎಂದು ವರದಿ ನೀಡಲಾಗಿತ್ತು. ಆದರೆ ಈ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಆ ಮೂಲಕ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿ ಸಿಎಂ ವಿರುದ್ಧ ಮತ್ತೊಂದು ಟೀಕಾಸ್ತ್ರ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments