Daily Horoscope

Select Your Language

Notifications

webdunia
webdunia
webdunia
webdunia

ಲಂಚ ಪ್ರಕರಣ: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ

Lokayukta Police
ಬೆಂಗಳೂರು: ಗುತ್ತಿಗೆಗಾರನಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಶಾಕಸ ಚಂದ್ರು ಲಮಾಣಿ ಜೊತೆಯಲ್ಲಿ ಅವರ ಇಬ್ಬರು ಸಹಾಯಕರಾದ ಮಂಜು ಲಮಾಣಿ ಮತ್ತು ಗುರು ನಾಯ್ಕ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಯಲಹಂಕ ಜ್ಯುಡಿಷಿಯಲ್ ಲೇಔಟ್‌ನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್‌ ಮುಂದೆ ಶಾಸಕರನ್ನು ಹಾಜರುಪಡಿಸಲಾಗಿತ್ತು.

ಸರ್ಕಾರಿ ಕಾಮಗಾರಿಯೊಂದರ ಸಂಬಂಧ ತಮ್ಮದೇ ಮಾಲೀಕತ್ವದ ಆಸ್ಪತ್ರೆಯಲ್ಲಿ ಲಂಚ ಪಡೆಯುವ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಶನಿವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. 

ಜಿಲ್ಲೆಯ ಸಂಕದಾಳ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚೆಕ್ ಡ್ಯಾಂ ನಿರ್ಮಾಣ ಹಾಗೂ ತಡೆಗೋಡೆ ಕಾಮಗಾರಿಗೆ ₹1 ಕೋಟಿ ರುಪಾಯಿ ಮಂಜೂರಾಗಿತ್ತು. ಈ ಕಾಮಗಾರಿ ವಿಜಯರಾಜ ಪೂಜಾರ ಎನ್ನುವವರು ಗುತ್ತಿಗೆ ಪಡೆದಿದ್ದರು. ಕಾಮಗಾರಿ ಮುಂದುವರಿಸಬೇಕಾದಲ್ಲಿ ಒಟ್ಟು ₹11 ಲಕ್ಷ ಕಮಿಷನ್ ಬೇಡಿಕೆಯನ್ನು ಶಾಸಕರು ಇಟ್ಟಿದ್ದರು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಮೇಲೆ ರೇಪ್‌: ಐವರು ಶಿಕ್ಷಕರು ಅಂದರ್‌