Publish Date: Wed, 06 Dec 2023 (14:21 IST)
Updated Date: Wed, 06 Dec 2023 (14:24 IST)
ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.ಅರುಣ್ (24) ಕೊಲೆಯಾದ ಆಟೋ ಚಾಲಕನಾಗಿದ್ದು,ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಂಬರ್ ಲೇಔಟ್ನಲ್ಲಿ ಘಟನೆ ನಡೆದಿದೆ.
10 ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ.ಅರುಣ್ ಗೆ ಮುಂದಿನ ತಿಂಗಳು ಮದುವೆ ಸಹ ಫಿಕ್ಸ್ ಆಗಿತ್ತು.ಯುವತಿಯೊಬ್ಬಳನ್ನ ಅರುಣ್ ಪ್ರೀತಿಸುತ್ತಿದ್ದ.ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ಕೊಲೆ ಯತ್ನ ಪ್ರಕರಣದಲ್ಲಿ ಅರುಣ್ ಭಾಗಿಯಾಗಿದ್ದ .ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ನಡೆದಿದ್ದು,ಸಂಬಂಧಿಕರಿಂದಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.