Publish Date: Tue, 15 Nov 2022 (19:04 IST)
Updated Date: Tue, 15 Nov 2022 (19:13 IST)
ಮಚ್ಚಿನಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿ ನಡೆದಿದೆ. ರಾತ್ರಿ ಸ್ನೇಹಿತರು ಪಾರ್ಟಿ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿರ್ಮಾಣ ಹಂತದ ಬಿಲ್ಡಿಂಗ್ ಮೇಲೆ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ..