ಬೆಂಗಳೂರು : ಶಾಸಕ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಹೈಕಮಾಂಡ್ ವಿರುದ್ಧ ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಗರಂ ಆಗಿದ್ದಾರೆ.
ತಮ್ಮ ತಂದೆ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೊಡದೆ ಇರೋದು ಅವರಿಗೆ ಮಾಡಿದ ದೊಡ್ಡ ಅನ್ಯಾಯ ಎಂದು ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಹೈಕಮಾಂಡ್ ವಿರುದ್ಧ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸೃಷ್ಠಿ ಪಾಟೀಲ್, ಅಪ್ಪಾಜಿಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ಅಸಮಾಧಾನವಿದೆ. ಅವರಿಗೆ ಸಚಿವರಾಗಲು ಎಲ್ಲಾ ಅರ್ಹತೆ ಇದೆ. ಮೂರು ಬಾರಿ ಶಾಸಕರಾಗಿದ್ದಾರೆ, ಪಕ್ಷನಿಷ್ಠೆ ತೋರಿದ್ದಾರೆ. ಇಡೀ ಹಾವೇರಿ ಜಿಲ್ಲೆಗೆ ಬಿ.ಸಿ ಪಾಟೀಲ್ ಅವರು ಏಕೈಕ ಕಾಂಗ್ರೆಸ್ ನಾಯಕರಾಗಿದ್ದಾರೆ. ಅಲ್ಲದೆ ಕಳೆದ 38 ವರ್ಷಗಳಿಂದ ಹಿರೇಕೆರೂರು ತಾಲೂಕಿಗೆ ಒಂದೇ ಒಂದು ಸಚಿವ ಸ್ಥಾನ ಸಿಕ್ಕಿಲ್ಲ. ಹೀಗೆ ಮಾಡಿದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬೇಕೆಂದರೆ ಎಲ್ಲಿಂದ ಆಗುತ್ತೆ? ಇದು ದೊಡ್ಡ ಅನ್ಯಾಯ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಶಾಸಕ ಬಿ.ಸಿ ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ