ಬೆಂಗಳೂರು: ಸಹಾಯ ಕೋರಿ ಬಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇದೀಗ ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ತಡೆ ನೀಡಿದ್ದು, ಬಿಎಸ್‌ವೈಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರಾ ಅವರು ಹೈಕೋರ್ಟ್ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ಹೈಕೋರ್ಟ್ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ.
ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು.