Publish Date: Fri, 21 Sep 2018 (18:57 IST)
Updated Date: Fri, 21 Sep 2018 (18:58 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಸರಕಾರಕ್ಕೆ ಬಿಜೆಪಿ ತೊಂದರೆ ಕೊಡುವುದು ಮುಂದುವರಿಸಿದರೆ ದಂಗೆ ಏಳುವಂತೆ ಜನರಿಗೆ ಕರೆ ನೀಡಬೇಕಾಗುತ್ತದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿ.ಎಸ್.ವೈ ಮನೆ ಮುಂದೆ ಪ್ರತಿಭಟನೆ ನಡೆದಿತ್ತು.
ಹೀಗಾಗಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ.