Publish Date: Fri, 30 Nov 2018 (18:50 IST)
Updated Date: Fri, 30 Nov 2018 (18:52 IST)
ಒಂದೆಡೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಕಸರತ್ತು ಜೋರಾಗಿತದ್ದರೆ, ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರು ಕೇರಳಕ್ಕೆ ಹೋಗುತ್ತಿರುವುದು ಕುತೂಹಲ ಮೂಡಿಸಿದೆ.
ಬೆಳಗಾವಿಯಲ್ಲಿ ಡಿ. 10 ರಂದು ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಸಾಧ್ಯತೆಗಳು ಗೋಚರಿಸುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ರಾಂತಿ ನೆಪದಲ್ಲಿ ಕೇರಳಕ್ಕೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.
ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಹಾಗೂ ಅದಕ್ಕೆ ತಯಾರಿ ನಡೆಸಲು ಯಡಿಯೂರಪ್ಪ ಕೇರಳದ ಕೋಟಕಲ್‌ನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಹಾಗೂ ಪ್ರಕೃತಿ ಚಿಕಿತ್ಸೆಯನ್ನು ಪಡೆಯಲು ಕೇರಳಕ್ಕೆ ತೆರಳುತ್ತಿದ್ದಾರೆ.
ರಾಜ್ಯ ರಾಜಕೀಯದಲ್ಲೇ ಬದಲಾವಣೆಗಳಾಗುತ್ತವೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೇರಳಕ್ಕೆ ತೆರಳುತ್ತಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಕೇರಳದಲ್ಲೇ ಕುಳಿತು ಅವರು ರಾಜಕೀಯ ಚದುರಂಗದ ದಾಳ ಉರುಳಿಸುವರೇ ಎಂಬುದು ಕುತೂಹಲ ಮೂಡಿಸಿದೆ.