ಬೆಂಗಳೂರು : ಸದ್ಯದಲ್ಲೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲಿದ್ದಾರೆ ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಸರ್ಕಾರದ ಆಡಳಿತ ವೈಖರಿಯಿಂದ ಕೆಲ ಕಾಂಗ್ರೆಸ್ ಶಾಸಕರು ಬೇಸತ್ತಿದ್ದಾರೆ. ಅವರಿಂದ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ಬಿಜೆಪಿಗೆ ಬೆಂಬಲ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಹಾಗೇ ‘ಲೋಕಸಭಾ ಚುನಾವಣೆಗೂ ಮುನ್ನ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ಖಚಿತ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.