ವಾರಂಟ್ ಜಾರಿಯಾದ ಕೂಡ್ಲೇ ಎಲ್ಲಿ ಹೋದ್ರೂ ಬಿಎಸ್ ಯಡಿಯೂರಪ್ಪ, ಹುಡುಕಾಟ ಶುರು

Krishnaveni K
ಶುಕ್ರವಾರ, 14 ಜೂನ್ 2024 (10:25 IST)
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೇ ಬಿಎಸ್ ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ. ಬಿಎಸ್ ವೈ ಎಲ್ಲಿದ್ದಾರೆಂದು ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ಮೊನ್ನೆಯಷ್ಟೇ ಯಡಿಯೂರಪ್ಪ ದೆಹಲಿಗೆ ಕೇಂದ್ರ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದರು. ಅದಾದ ಬಳಿಕ ಅವರು ರಾಜ್ಯಕ್ಕೆ ಮರಳಿರಲಿಲ್ಲ. ಹೀಗಾಗಿ ರಾಜ್ಯಕ್ಕೆ ಮರಳುವವರೆಗೆ ಅವಕಾಶ ಕೊಡಿ ಎಂದು ಬಿಎಸ್ ವೈ ಮನವಿ ಮಾಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಅದನ್ನು ನಿರಾಕರಿಸಿದ್ದರು.

ಕೋರ್ಟ್ ನಿಂದ ಬಂಧನ ವಾರಂಟ್ ತಂದಿದ್ದಾರೆ. ಇದೀಗ ಬಿಎಸ್ ವೈ ಎಲ್ಲಿ ಹೋಗಿದ್ದಾರೆಂಬ ಮಾಹಿತಿಯಿಲ್ಲ. ಹೀಗಾಗಿ ಅವರನ್ನು ಬಂಧಿಸಲು ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಸದ್ಯಕ್ಕೆ ಬಿಎಸ್ ವೈ ಎಲ್ಲಿ ಹೋಗಿದ್ದಾರೆಂಬ ಮಾಹಿತಿಯಿಲ್ಲ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ರಾಜ್ಯ ಬಿಜೆಪಿ ಘಟಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಹಿಂದೆ ರಾಹುಲ್ ಗಾಂಧಿಯವರನ್ನು ಕೋರ್ಟ್ ಮುಂದೆ ಬರುವಂತೆ ಮಾಡಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಈಗ ಬಿಎಸ್ ವೈ ಮೇಲೆ ಈ ರೀತಿ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಬಿಎಸ್ ವೈ ಪುತ್ರ, ಸಂಸದ ಬಿವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ