ಕೊವಿಡ್ ಕಾಲದಲ್ಲಿ ಹಗರಣ ಆರೋಪಗಳಿಗೆ ಸಂಡೂರಿನಲ್ಲಿ ಯಡಿಯೂರಪ್ಪ ಪ್ರತಿಕ್ರಿಯೆ ಹೀಗಿತ್ತು: ವಿಡಿಯೋ

Krishnaveni K
ಶನಿವಾರ, 9 ನವೆಂಬರ್ 2024 (14:42 IST)
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ನಡೆಯುವ 3 ಕ್ಷೇತ್ರಗಳಲ್ಲೂ ಬಿಜೆಪಿ- ಎನ್‍ಡಿಎ ಅಭ್ಯರ್ಥಿಗಳ ಗೆಲುವು ಖಚಿತ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
 
ಸಂಡೂರು ಕ್ಷೇತ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಈಗಾಗಲೇ 3 ಕ್ಷೇತ್ರಗಳಿಗೆ ಹೋಗಿ ಬಂದಿದ್ದೇನೆ. ವಾತಾವರಣ ದಿನೇದಿನೇ ಬಿಜೆಪಿ ಪರವಾಗಿ ಬದಲಾಗುತ್ತಿದೆ. ಮುಖ್ಯಮಂತ್ರಿ ಇನ್ನೂ 2 ದಿನ ಇಲ್ಲೇ ಠಿಕಾಣಿ ಹೂಡಿದ್ದನ್ನು ನೋಡಿದಾಗ ಅವರಿಗೆ ಸೋಲಿನ ಆತಂಕ ಮೂಡಿದಂತಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ- ಎನ್‍ಡಿಎ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.
ಇವತ್ತು ಸಂಜೆವರೆಗೆ ಇಲ್ಲಿದ್ದು ಶಿಗ್ಗಾಂವಿ ಕಡೆ ಪ್ರವಾಸ ಮಾಡುವುದಾಗಿ ಅವರು ತಿಳಿಸಿದರು.

ಸಂಡೂರಿನಲ್ಲಿ ಹಿನ್ನಡೆ ಆಗುವುದು ಮನವರಿಕೆ ಆದುದರಿಂದ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವು ಇಲ್ಲಿ ಬೀಡು ಬಿಟ್ಟಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕೋವಿಡ್ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲೇ ಕೆಲಸಗಳು ಆಗಿವೆ. ಎಲ್ಲವನ್ನೂ ಕೆದಕುವ ದುರುದ್ದೇಶದಿಂದ ಕಾಂಗ್ರೆಸ್ ಸರಕಾರವು ಕೆಲಸ ಮಾಡುತ್ತಿದೆ. ಅದರಿಂದ ಅವರಿಗೆ ಏನೂ ಲಾಭ ಆಗುವುದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ನಾವು ಯಾವುದೇ ತಪ್ಪು ಮಾಡಿಲ್ಲ; ಪ್ರಾಮಾಣಿಕವಾಗಿ ನಮ್ಮ ಕೆಲಸ ಮಾಡಿದ್ದೇವೆ ಎಂದು ನುಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments