Publish Date: Tue, 06 Mar 2018 (08:48 IST)
Updated Date: Tue, 06 Mar 2018 (08:50 IST)
ಬೆಂಗಳೂರು: ನಗರದ ಕೆಲವೆಡೆ ತರಾತುರಿಯಲ್ಲಿ ರಸ್ತೆ, ಮೇಲ್ಸೇತುವೆ ಉದ್ಘಾಟನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.
‘ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಸಿಎಂ ಸಿದ್ದರಾಮಯ್ಯ ಅಲ್ಲಲ್ಲಿ ರಿಬ್ಬನ್ ಕಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಬಿಎಸ್ ವೈ ಟ್ವಿಟರ್ ಮೂಲಕ ವ್ಯಂಗ್ಯ ಮಾಡಿದ್ದಾರೆ.
ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಹೆಣ್ಣೂರು ಮೇಲ್ಸೇತುವೆಗೆ ಕಾಮಗಾರಿ ಮುಗಿಯುವ ಮೊದಲೇ ಚಾಲನೆ ನೀಡಿದ್ದು, ಟೀಕೆಗೊಳಗಾಗಿತ್ತು. ಈ ಬಗ್ಗೆ ಸ್ಥಳೀಯರೇ ಆಕ್ಷೇಪ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ