Publish Date: Thu, 28 Jun 2018 (13:23 IST)
Updated Date: Thu, 28 Jun 2018 (13:25 IST)
]ಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಆಪ್ತ ಲೆಹರ್ ಸಿಂಗ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ನಿನ್ನೆಯೇ ದೆಹಲಿಗೆ ತೆರಳಿದ್ದ ಎಚ್ ಡಿ ದೇವೇಗೌಡರು ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದಾರೆ.
ಕರ್ನಾಟಕ ಭವನದಲ್ಲಿರುವ ದೇವೇಗೌಡರನ್ನು, ಬಿಎಸ್ ವೈ ಆಪ್ತರಾಗಿರುವ ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಭೇಟಿಯಾಗಿದ್ದಾರೆ. ಆದರೆ ಈ ಭೇಟಿಯ ಉದ್ದೇಶವೇನೆಂದು ತಿಳಿದುಬಂದಿಲ್ಲ. ಆದರೆ ಕಾಂಗ್ರೆಸ್-ಜೆಡಿಎಸ್ ನಡುವೆ ಉಂಟಾಗಿರುವ ಸಣ್ಣ ವೈಮನಸ್ಯದ ನಡುವೆ ಬಿಜೆಪಿ ಪ್ರಭಾವಿ ನಾಯಕ ದೇವೇಗೌಡರನ್ನು ಭೇಟಿಯಾಗಿರುವ ಬಗ್ಗೆ ಹಲವು ಊಹಾಪೋಹಗಳು ಎದ್ದಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.