Publish Date: Tue, 12 Jun 2018 (09:37 IST)
Updated Date: Tue, 12 Jun 2018 (09:38 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಸೂಕ್ತ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಿಗೆ ಹಣದ ಅಮಿಷವೊಡ್ಡಿ ಬಿಜೆಪಿಗೆ ಸೆಳೆಯುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪವನ್ನು ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ.
ಬಿಎಸ್ ವೈ ನಮ್ಮ ಶಾಸಕರಿಗೆ 50, 100 ಕೋಟಿ ರೂ. ಕೊಡುತ್ತೇನೆ, ನಮ್ಮ ಜತೆ ಬನ್ನಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ಕಪ್ಪು ಹಣ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಸ್ ವೈ ನಾವು ಯಾರಿಗೂ ಹಣದ ಅಮಿಷವೊಡ್ಡಿಲ್ಲ. ನೀವು ಮತ್ತು ನಿಮ್ಮ ಪಕ್ಷ ಹೀನಾಯವಾಗಿ ಸೋತಿದ್ದರೂ ನಿಮ್ಮ ದುರಹಂಕಾರ ಕಡಿಮೆಯಾಗಿಲ್ಲ ಏಕೆ ಎಂದು ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.