Publish Date: Sat, 03 Nov 2018 (09:06 IST)
Updated Date: Sat, 03 Nov 2018 (09:09 IST)
ಬೆಂಗಳೂರು: ಲೋಕಸಭೆಯ ಐದು ಕ್ಷೇತ್ರಗಳಿಗೆ ಇಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಭಾರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ಕುಟುಂಬ ಸಮೇತರಾಗಿ ಶಿವಮೊಗ್ಗದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಯಡಿಯೂರಪ್ಪ ತಮ್ಮ ಪುತ್ರ ರಾಘವೇಂದ್ರ ಶಿವಮೊಗ್ಗದಲ್ಲಿ ಗೆಲುವು ಸಾಧಿಸುವುದು ಶೇ.100 ರಷ್ಟು ಖಚಿತ ಎಂದಿದ್ದಾರೆ.
ಅಷ್ಟೇ ಅಲ್ಲ, ಜಮಖಂಡಿ, ಬಳ್ಳಾರಿಯಲ್ಲೂ ಗೆಲುವು ನಮ್ಮದೇ. ಎಲ್ಲಾ ಕ್ಷೇತ್ರಗಳಲ್ಲೂ ನಮಗೆ ಬಹುಮತ ಸಿಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.