Publish Date: Mon, 19 Feb 2018 (10:12 IST)
Updated Date: Mon, 19 Feb 2018 (10:14 IST)
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ನಿನ್ನೆಯೇ ಆಗಮಿಸಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ಸಿಎಂ ಸಿದ್ದರಾಮಯ್ಯ, ಬಿಜೆಪಿ ಘಟಾನುಘಟಿ ನಾಯಕರು ತೆರಳಿರದೂ ರಾಜ್ಯಾಧ್ಯಕ್ಷ ಬಿಎಸ್ ವೈ ತೆರಳಿಲ್ಲ!
ಶಿವಮೊಗ್ಗದಲ್ಲಿ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರುವ ಬಿಎಸ್ ವೈ ತವರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಭೇಟಿಯಾಗಿಲ್ಲ.
ನಿನ್ನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಅನಂತ ಕುಮಾರ್, ಡಿಜಿಪಿ ನೀಲಮಣಿ ರಾಜು, ಸಂಸದ ಪ್ರತಾಪ್ ಸಿಂಹ ಮತ್ತಿತರರು ಸ್ವಾಗತ ಕೋರಿದರು. ಪ್ರಧಾನಿ ಮೈಸೂರಿನ ಪಂಚತಾರಾ ಹೋಟೆಲ್ ಒಂದರಲ್ಲಿ ಬಿಗಿ ಭದ್ರತೆಯ ನಡುವೆ ವಾಸ್ತವ್ಯ ಹೂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ