Publish Date: Thu, 08 Nov 2018 (09:05 IST)
Updated Date: Thu, 08 Nov 2018 (09:06 IST)
ಮಂಗಳೂರು: ಆಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸುತ್ತಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಜನಾರ್ಧನ ರೆಡ್ಡಿ ಈಗ ನಮ್ಮ ಪಕ್ಷದಲ್ಲಿಲ್ಲ. ಹಾಗಿರುವಾಗ ನಾವು ಯಾಕೆ ವಿಪಕ್ಷದವರ ಕೈವಾಡ ಎಂದೆಲ್ಲಾ ದೂರೋಣ? ಅಕ್ರಮ ನಡೆಸಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ನೇತೃತ್ವ ವಹಿಸಲು ಕೇರಳಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಯಡಿಯೂರಪ್ಪಗೆ ರೆಡ್ಡಿ ಪ್ರಕರಣದ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದ್ದಾರೆ. ಆದರೆ ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳುತ್ತಾರೋ ಕೈಗೊಳ್ಳಲಿ. ಈ ಪ್ರಕರಣದ ಬಗ್ಗೆ ನನಗೇನೂ ಮಾಹಿತಿಯಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.