Publish Date: Mon, 02 Jul 2018 (11:26 IST)
Updated Date: Mon, 02 Jul 2018 (11:28 IST)
ಬೆಂಗಳೂರು: ಇಂದು ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸಲಿದೆ.
ಅಧಿವೇಶನ ಎಂದ ಮೇಲೆ ಪ್ರತಿಪಕ್ಷಗಳು ಒಂದಲ್ಲಾ ಒಂದು ಕಾರಣಕ್ಕೆ ತಗಾದೆ ತೆಗೆಯುವುದು ಸಾಮಾನ್ಯ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಸರ್ಕಾರ ಒಳ್ಳೆ ಕೆಲಸ ಮಾಡಿದ್ರೆ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ನೋಡೋಣ, ಬಜೆಟ್ ನಲ್ಲಿ ಏನು ಹೇಳುತ್ತಾರೆಂದು. ಬಜೆಟ್ ನಲ್ಲಿ ಸಾಲಮನ್ನಾ ಘೋಷಣೆ ಮಾಡುತ್ತಾರಾ ಎಂದು ನೋಡೋಣ’ ಎಂದು ಯಡಿಯೂರಪ್ಪ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.