ರಾಷ್ಟ್ರೀಯ ಕಾರ್ಯಕಾರಿಣಿ ನಡುವೆ ದಿಡೀರ್ ಬಿಎಸ್ ವೈ ಬೆಂಗಳೂರಿಗೆ

ಶನಿವಾರ, 8 ಸೆಪ್ಟಂಬರ್ 2018 (10:07 IST)
ಬೆಂಗಳೂರು: ನವದೆಹಲಿಯಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮರಳಿ ತವರಿಗೆ ಬರುತ್ತಿದ್ದಾರೆ.

ಕಾರ್ಯಕಾರಿಣಿಯ ನಡುವೆಯೂ ಬಿಎಸ್ ವೈ ದಿಡೀರ್ ಆಗಿ ಬೆಂಗಳೂರಿಗೆ ವಾಪಸ್ ಆಗುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಕೆಲವು ಮೂಲಗಳ ಪ್ರಕಾರ ಬಿಎಸ್ ವೈ ಸ್ವಾಮೀಜಿಯೊಬ್ಬರನ್ನು ಭೇಟಿಯಾಗಲು ಬೆಂಗಳೂರಿಗೆ ಬರುತ್ತಿದ್ದು, ಭೇಟಿ ಬಳಿಕ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಇನ್ನು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಎಲ್ಲಾ ರಾಜ್ಯಗಳ ನಾಯಕರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆ ನಡೆಸಲಿದ್ದು, ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ತಯಾರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಒಂದೇ ದಿನ ಇಷ್ಟೊಂದು ದೂರ ನಡೆದರಂತೆ ರಾಹುಲ್ ಗಾಂಧಿ!