Publish Date: Tue, 12 Dec 2017 (11:27 IST)
Updated Date: Tue, 12 Dec 2017 (11:29 IST)
ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಕೊಲೆಯಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಅವರೊಬ್ಬರ ತಲೆತಿರುಕ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡದಲ್ಲಿ ಪರೇಶ್ ಸಾವಿನ ಪ್ರಕರಣ ಹಿನ್ನಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಪರೇಶ್ ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು.
ಪರೇಶ್ ಸಾವಿನ ಪ್ರಕರಣವನ್ನು ಕೇಂದ್ರ ಸಚಿವರ ಗಮನಕ್ಕೆ ತರುತ್ತೇವೆ. ಈ ಬಗ್ಗೆ ಪಾರ್ಲಿಮೆಂಟ್ ನಲ್ಲೂ ಪ್ರಸ್ತಾಪಿಸುತ್ತೇವೆ ಎಂದು ಯಡಿಯೂರಪ್ಪ ಗುಡುಗಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಂದೂಗಳ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೇ ಗೊತ್ತಿಲ್ಲ. ಹೊನ್ನಾವರದಲ್ಲಿ ಪರೇಶ್ ಕೊಲೆಯಾದಾಗ ಸಿಎಂ ಅದೇ ಕ್ಷೇತ್ರದಲ್ಲಿದ್ದರು. ಅವರದ್ದು ಸಾಧನಾ ಯಾತ್ರೆಯಲ್ಲ, ಸುಳ್ಳಿನ ಯಾತ್ರೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ