Publish Date: Fri, 13 Apr 2018 (08:58 IST)
Updated Date: Fri, 13 Apr 2018 (08:59 IST)
ಧಾರವಾಡ: ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಮ್ಮ ಸರ್ಕಾರ ಬಂದರೆ ಶಾಸಕ ವಿನಯ್ ಕುಲಕರ್ಣಿ ಬಂಧನ ಶತಸ್ಸಿದ್ಧ ಎಂದಿದ್ದಾರೆ.
ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಹೆಸರು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಈ ರೀತಿ ಪ್ರಮಾಣ ಮಾಡಿದ್ದಾರೆ.
‘ನಮ್ಮ ಸರ್ಕಾರ ಬಂದರೆ 30 ದಿನಗಳೊಳಗೆ ವಿನಯ್ ಕುಲಕರ್ಣಿ ಬಂಧಿಸಲಾಗುವುದು. ಯೋಗೀಶ್ ಗೌಡ ಭ್ರಷ್ಟ ವಿನಯ್ ಕುಲಕರ್ಣಿ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದರು. ಅದೇ ಕಾರಣಕ್ಕೆ ಅವರನ್ನು ಕೊಲೆ ಮಾಡಲಾಗಿದೆ’ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.