Select Your Language

Notifications

webdunia
webdunia
webdunia
webdunia

ಫಲಿತಾಂಶಕ್ಕೂ ಮೊದಲೇ ಪ್ರಮಾಣವಚನದ ಬಗ್ಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ!

ಬಿಜೆಪಿ
ಬೆಂಗಳೂರು , ಸೋಮವಾರ, 14 ಮೇ 2018 (10:33 IST)
ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ಬಂದೇ ಬರುತ್ತದೆ ಎಂಬ ವಿಶ್ವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಹುದ್ದೆಯ ಕನವರಿಕೆ ಮಾಡುತ್ತಿದ್ದಾರೆ.

ಈ ಹಿಂದೆಯೂ ಹಲವು ಬಾರಿ ತಾವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕದ ಬಗ್ಗೆ ಹೇಳಿಕೆ ನೀಡಿದ್ದ ಬಿಎಸ್ ವೈ ಇದೀಗ ಮತ್ತೊಮ್ಮೆ ಫಲಿತಾಂಶದ ಮುನ್ನಾ ದಿನ ಇಂತಹದ್ದೇ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಬಗ್ಗೆ ಜನರಲ್ಲಿ ವಿರೋಧಾಭಿಪ್ರಾಯವಿದೆ. ಅದೇ ಕಾರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಿ ಬಿಜೆಪಿಗೆ ಬಹುಮತ ಸಿಗುವಂತೆ ಮಾಡಿದ್ದಾರೆ. ನಾಳೆ ಫಲಿತಾಂಶದಲ್ಲಿ ಬಿಜೆಪಿಗೆ ಬಹುಮತ ಸಿಗುವುದು ಗ್ಯಾರಂಟಿ.

ನಾವು ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ. ನಾಳೆಯೇ ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆಗೆ ಚರ್ಚಿಸಿ ಪ್ರಮಾಣ ವಚನ ದಿನಾಂಕ ನಿಗದಿಗೊಳಿಸುವುದಾಗಿ ಬಿಎಸ್ ವೈ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಿವೃತ್ತಿಯಾಗಬೇಕೆಂದುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಿದ್ದು ಯಾಕೆ ಗೊತ್ತಾ?!