Publish Date: Fri, 15 Apr 2022 (14:33 IST)
Updated Date: Fri, 15 Apr 2022 (14:35 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪು ಮಾಡದ ಈಶ್ವರಪ್ಪ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ..ಯಾವುದೋ ಒತ್ತಾಯದಿಂದ ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.. ಯಾವುದೇ ಅಪರಾಧ ಮಾಡದೇ ಇದ್ದರೂ, ರಾಜೀನಾಮೆ ನೀಡುವಂತಾಗಿದೆ..ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಇನ್ನೆರಡು ತಿಂಗಳಲ್ಲಿ ತನಿಖೆ ಮುಗಿದ್ರೆ, ಇವರ ಪಾತ್ರವೇನೂ ಅಂತ ಗೊತ್ತಾಗುತ್ತೆ..ಈಶ್ವರಪ್ಪನವರು ಆರೋಪ ಮುಕ್ತರಾಗಿ ಹೊರಗೆ ಬರುತ್ತಾರೆ ಅನ್ನೋ ನಂಬಿಕೆ ಇದೆ ಅಂತ ಶಿವಮೊಗ್ಗದಲ್ಲಿಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.