Publish Date: Sat, 19 Aug 2017 (13:42 IST)
Updated Date: Sat, 19 Aug 2017 (13:45 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವುದೇ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ಬಿಜೆಪಿ ಮುಖಂಡರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಉದಾಸಿ, ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಕೇಸ್‌ಗಳನ್ನು ದಾಖಲಿಸಲಾಗುತ್ತಿದೆ. ಯಾವುದೇ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಾಥಮಿಕ ಅಧಿಸೂಚನೆ ವೇಳೆ ಡಿನೋಟಿಫಿಕೇಶನ್ ಮಾಡಲಾಗಿದೆಯೇ ಹೊರತು ಯಾವುದೇ ಅಕ್ರಮ ಎಸಗಿಲ್ಲ. ಸಿಎಂ ಸಿದ್ದರಾಮಯ್ಯ ಸರಕಾರ ಕುಂಭಕರ್ಣ ನಿದ್ರೆಯಿಂದ ಎದ್ದು 10 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ತುಂಬಿದೆ ಎಂದು ಕಿಡಿಕಾರಿದರು.
ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೇಸ್ ಎಂದು ಬಿಜೆಪಿ ಮುಖಂಡರಾದ ಮಾಜಿ ಸಚಿವ ಬೊಮ್ಮಾಯಿ, ಉದಾಸಿ ಮತ್ತು ಪುಟ್ಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.