ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಎರಡು ನಾಲಿಗೆಯಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ವಿಪಕ್ಷಗಳು ಹಗಲಿರಳು ಹೋರಾಟ ಮಾಡಿದರೂ ಸಾಲ ಮನ್ನಾ ಮಾಡಿರಲಿಲ್ಲ. ನನ್ನಲ್ಲಿ ಹಣ ಪ್ರಿಂಟ್ ಮಾಡುವ ಮಷಿನ್ ಇಲ್ಲ ಎಂದು ತಳ್ಳಿಹಾಕಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಇದೀಗ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದಲ್ಲಿ ನಾನೂ ಸಾಲ ಮನ್ನಾ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದೇನೆ. ಆದಾಗ್ಯೂ ಕೇವಲ ರಾಜಕಾರಣಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಯಡಿಯೂರಪ್ಪ ತಮ್ಮ ಬಿಜೆಪಿ ನಾಯಕರೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರ ಮನವೊಲಿಸಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಿ. ಮೋದಿಯ ಮುಂದೆ ಬಾಯಿಬಿಡದ ನಾಯಕರು ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.