Select Your Language

Notifications

webdunia
webdunia
webdunia
webdunia

ಮತ್ತೆ ಸಂಕಷ್ಟದಲ್ಲಿ ಬಿ.ಎಸ್. ವೈ.

ಮತ್ತೆ ಸಂಕಷ್ಟದಲ್ಲಿ ಬಿ.ಎಸ್. ವೈ.
ಬೆಂಗಳೂರು , ಬುಧವಾರ, 14 ಸೆಪ್ಟಂಬರ್ 2022 (15:26 IST)
.ಎಸ್.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್‌ಕುಮಾರ್‌ಆದೇಶ ಹೊರಡಿಸಿದ್ದಾರೆ. ನವೆಂಬರ್ 2 ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್‌ಸ್ಪೆಕ್ಟರ್ ಅವರಿಗೆ ನ್ಯಾಯಾಲಯ ಸೂಚಿಸಿದೆ.
ದೂರಿನಲ್ಲಿ ಬಿ.ಎಸ್.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್‌ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್‌ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕೆ.ರವಿ, ಬಿಎಸ್‌ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ಬ್ಲಾಸ್ಟ್ 8 ತಿಂಗಳ ಮಗು ಸಾವು