Publish Date: Mon, 18 Sep 2017 (20:02 IST)
Updated Date: Mon, 18 Sep 2017 (20:03 IST)
ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಯಾವುದೇ ನೈತಿಕತೆಯಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು, ಶಾಸಕರ ವಿರುದ್ಧದ ಭ್ರಷ್ಟಾಚಾರಗಳ ಚಾರ್ಜ್‌ಶೀಟ್ ಸಲ್ಲಿಸುತ್ತೇನೆ ಎಂದು ಹೇಳುತ್ತಿರುವುದೆಲ್ಲಾ ಸುಳ್ಳು. ಒಂದು ವೇಳೆ, ದಾಖಲೆಗಳು ನಿಜವಾಗಿದ್ದಲ್ಲಿ ಎಸಿಬಿಗೆ ದೂರು ನೀಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ ಸೋಲಿನ ಭಯದಿಂದ ಶಿವಮೊಗ್ಗ ಕ್ಷೇತ್ರವನ್ನು ತೊರೆದು ಉತ್ತರ ಕರ್ನಾಟಕದಿಂದ ಸ್ಪರ್ಧಿಸಲು ಲೆಕ್ಕ ಹಾಕುತ್ತಿದ್ದಾರೆ. ಆದರೆ, ಅವರ ಲೆಕ್ಕಾಚಾರ ಉಲ್ಟಾ ಹೊಡೆಯಲಿವೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಯಡಿಯೂರಪ್ಪನವರ ಮುಖ್ಯಮಂತ್ರಿಯಾಗುವ ಕನಸು ಕನಸಾಗಿಯೇ ಉಳಿಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.