Publish Date: Wed, 13 Dec 2017 (13:48 IST)
Updated Date: Wed, 13 Dec 2017 (13:50 IST)
ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯಲ್ಲಿ ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರು ಕನ್ನಡಕವನ್ನು ಕಳೆದುಕೊಂಡಿದ್ದಾರೆ.
ಪರಿವರ್ತನಾ ಯಾತ್ರೆ ಮಂಗಳವಾರದಂದು ದೇವದುರ್ಗ ಕ್ಷೇತ್ರದ ಮೂಲಕ ರಾಯಚೂರು ಜಿಲ್ಲೆಗೆ ಪ್ರವೇಶ ಪಡೆದಿದ್ದು, ರಾಯಚೂರು ನಗರದಲ್ಲಿ ಮಂಗಳವಾರ ರಾತ್ರಿ ಯಾತ್ರೆ ಅಂಗವಾಗಿ ನಡೆದ ಸಮಾವೇಶದಲ್ಲಿ ಯಡಿಯೂರಪ್ಪ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಿದ ಸಂದರ್ಭದಲ್ಲಿ ಅವರ ಕನ್ನಡಕ ಕಳೆದುಹೋಗಿದೆ ಎಂದು ತಿಳಿದುಬಂದಿದೆ.
ಕನ್ನಡಕ ಕಳೆದಿರುವುದರಿಂದ ಯಡಿಯೂರಪ್ಪ ಅವರ ಕಣ್ಣುಗಳು ಧೂಳಿನಿಂದ ಕೆಂಪಾಗಿದ್ದು, ಹೋಟಲ್‍ನಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇನ್ನು ಬಿಎಸ್‌ವೈ ಅವರ ಆಪ್ತ ಸಹಾಯಕ ಸಂತೋಷ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್‍ನಲ್ಲಿ ಪರ್ಯಾಯ ಕನ್ನಡಕ ತರಲಿದ್ದಾರೆ. ಬಳಿಕ ಯಡಿಯೂರಪ್ಪನವರು ಮಾಜಿ ಸಚಿವ ಸಿ.ಸಿ.ಪಾಟೀಲ್ ಕುಟುಂಬದ ಮದುವೆಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.