Publish Date: Sat, 02 Dec 2017 (21:19 IST)
Updated Date: Sat, 02 Dec 2017 (21:23 IST)
ಮುಂಬರುವ ಚುನಾವಣೆಯಲ್ಲಿ ಗೆದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗ್ತಾರೆ ಅಂತ ನಾಗಾಸಾಧುಗಳು ಭವಿಷ್ಯ ನುಡಿದಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ರಾಮೇಶ್ವರಂಗೆ ತೆರಳುವ ಮುನ್ನ ಬಿಜೆಪಿ ನಾಯಕರ ಮನೆಗಳಿಗೆ ಭೇಟಿ ನೀಡಿರುವ ನಾಗಾಸಾಧುಗಳು, ಯಡಿಯೂರಪ್ಪ ಮುಂದೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾಗಿ ಬಿಜೆಪಿ ಮುಖಂಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಾಗಾಸಾಧುಗಳು ಮಾತು ಯಾವತ್ತೂ ಸತ್ಯವಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದ ನಾಗಾಸಾಧುಗಳು ಪೂಜೆ ಕಾರ್ಯಕ್ರಮ ನೆರವೇರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.