Publish Date: Fri, 05 May 2017 (13:11 IST)
Updated Date: Fri, 05 May 2017 (13:12 IST)
ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅತೃಪ್ತ ನಾಯಕರಿಗೆ ತಿರುಗೇಟು ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾರ್ಯಕಾರಿಣಿ ಸಭೆಗೆ ಹಿರಿಯ ನಾಯಕರು ಆಗಮಿಸಲಿದ್ದು, ನಾಳಿಯ ಅಧ್ಯಕ್ಷೀಯ ಭಾಷಣದಲ್ಲಿ ಅವರ ಎದುರಿಗೆ ಬಂಡಾಯ ನಾಯಕರ ಬಂಡವಾಳ ಬಯಲು ಮಾಡಲು ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ ಉದ್ಭವಾಗಿರುವ ಭಿನ್ನಮತ ಕುರಿತಂತೆ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಎದುರಾಗಿರುವ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ ಎಂದು ಬಿಎಸ್‌ವೈ ಆಪ್ತ ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್‌ನ ವಿಪಕ್ಷ ನಾಯಕ ಈಶ್ವರಪ್ಪ ಮಧ್ಯದ ಸಮುರ ಮುಂದುವರಿದಿದ್ದು, ಇಬ್ಬರು ನಾಯಕರು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್, ಈಶ್ವರಪ್ಪಗೆ ತಾಕೀತು ಮಾಡಿದ್ದರೂ, ಕ್ಯಾರೆ ಎನ್ನದ ಈಶ್ವರಪ್ಪ ಬ್ರಿಗೇಡ್ ಚಟುವಟಿಕೆಯಲ್ಲಿ ಮುಂದುವರಿದಿರುವುದು ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.