Publish Date: Fri, 07 Feb 2020 (10:52 IST)
Updated Date: Fri, 07 Feb 2020 (10:55 IST)
ನವದೆಹಲಿ : ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯನ್ನು ನಿವಾರಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಅವರನ್ನು ಅಖಾಡಕ್ಕೀಳಿಸಿದ್ದಾರೆ ಎನ್ನಲಾಗಿದೆ.
ಈ ವಿಚಾರವಾಗಿ ನಿನ್ನೆ ದೆಹಲಿಗೆ ತೆರಳಿದ ಬಿಎಸ್ ವೈ ಪುತ್ರ ವಿಜಯೇಂದ್ರ ನಿನ್ನೆ ರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆ ಬಿಎಲ್ ಸಂತೋಷ್ ಮತ್ತು ಜೆಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ವಿಜಯೇಂದ್ರ ಇಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.