ಬಿಎಸ್ವೈ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಅಭಿಮಾನಿ!

Webdunia
ಮಂಗಳವಾರ, 27 ಜುಲೈ 2021 (13:54 IST)
ಬೆಂಗಳೂರು(ಜು.27): ಕಳೆದ ಕೆಲ ಸಮಯದಿಂದ ಕೇಳಿ ಬಂದಿದ್ದ ಎಲ್ಲಾ ಗೊಂದಲಗಳಿಗೂ ಬಿ. ಎಸ್. ಯಡಿಯೂರಪ್ಪನವರ ರಾಜೀನಾಮೆ ತೆರೆ ಎಳೆದಿದೆ. ಬಿಎಸ್ವೈ ರಾಜೀನಾಮೆ ಒಂದೆಡೆ ಅವರ ವಿರೋಧಿ ಬಣವನ್ನು ಸಂತಸಕ್ಕೀಡು ಮಾಡಿದ್ದರೆ, ವಿರೋಧ ಪಕ್ಷಗಳಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುವಂತೆ ಮಾಡಿದೆ. ಆದರೆ ಇವೆಲ್ಲದರ ನಡುವೆ ಬಿಎಸ್ವೈ ಅಭಿಮಾನಿಗಳು ಮಾತ್ರ ಆಘಾತಕ್ಕೊಳಗಾಗಿದ್ದಾರೆ. ಅತ್ತ ಬಿಎಸ್ವೈ ತವರು ಕ್ಷೇತ್ರ ಶಿಕಾರಿಪುರದಲ್ಲಿ ನೀರವ ಮೌನ ಮನೆ ಮಾಡಿದೆ.

* ರಾಜಕೀಯ ಗೊಂದಲಗಳಿಗೆ ತೆರೆ ಎಳೆದ ಬಿಎಸ್ವೈ ರಾಜೀನಾಮೆ
* ನೆಚ್ಚಿನ ನಾಯಕನ ರಾಜೀನಾಮೆಯಿಂದ ಬೆಂಬಲಿಗರಿಗೆ ಆಘಾತ
* ರಾಜೀನಾಮೆ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಬಿಎಸ್ವೈ ಅಭಿಮಾನಿ

ಇನ್ನು ಬಿಎಸ್ವೈ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ವಿರುದ್ಧ ಗುಡುಗಿದ್ದ ದಿಂಗಾಲೇಶ್ವರ ಸ್ವಾಮೀಜಿಗಳು ಬಿಎಸ್ವೈ ಕಣ್ಣೀರಿನಿಂದ ಕಮಲ ಪಾಳಯ ಕೊಚ್ಚಿ ಹೋಗುತ್ತದೆ ಎಂದು ಭವಿಷ್ಯ ನಡಿದಿದ್ದರು. ಆದರೀಗ ತಮ್ಮ ನೆಚ್ಚಿನ ನಾಯಕ ಪದತ್ಯಾಗ ಮಾಡಿದ ಬೆನ್ನಲ್ಲೇ ಗುಂಡ್ಲುಪೇಟೆಯ ಅವರ ಬೆಂಬಲಿಗರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿರುವ ಬಿ. ಎಸ್. ಯಡಿಯೂರಪ್ಪ ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದಿದ್ದಾರೆ.
ಅಲ್ಲದೇ ಅಭಿಮಾನಿಗಳಿಗೂ ಕಿವಿಮಾತು ಹೇಳಿರುವ ಬಿಎಸ್ವೈ ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದೂ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪಮುಖ್ಯಮಂತ್ರಿ ಬಿಡಿ, ವೈರಲ್ ಅಡಿಯೋ ದೆಸೆಯಿಂದ ಜಮೀರ್ ಅಹ್ಮದ್ ಗೆ ಮಂತ್ರಿಗಿರಿಯೂ ಕಷ್ಟ ಕಷ್ಟ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಲ್ಲ, ಕರ್ನಾಟಕದ ಮಂತ್ರಿ ಯಾರಾಗಬೇಕು ಎಂದು ಈ ಇಬ್ಬರು ನಿರ್ಧರಿಸುತ್ತಾರೆ

ಶಿಕ್ಷಿಸುವ ನೆಪದಲ್ಲಿ ಮಗುವನ್ನು ಚರಂಡಿಯಲ್ಲಿ ಮುಳುಗಿಸಿದ ಇವನೆಂಥಾ ತಂದೆ: ವೈರಲ್ Video

Karnataka Weather: ಇಂದಿನಿಂದ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಮುಂದಿನ ಸುದ್ದಿ
Show comments