ಕೊಡಗು ಹಾಗೂ ಇತರೆ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರದಿಂದ  ಇನ್ನಷ್ಟು ಅನುದಾನ ಬಿಡುಗಡೆ ಮಾಡುವಂತೆ  ಶಿಫಾರಸು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
									
			
			 
 			
 
 			
					
			        							
								
																	ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದೆ. ಇನ್ನಷ್ಟು ಅನುದಾನ ಬಿಡುಗಡೆಗೊಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಕೇಳುವೆ.
ರಾಜ್ಯ ಸರ್ಕಾರ ಇನ್ನೂ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರದ ಕಾರ್ಯವೈಖರಿ ಸಾಲುತ್ತಿಲ್ಲ ಎಂದರು.
									
										
								
																	ಮಳೆಯಿಂದ ಕೊಡಗು ಜಿಲ್ಲೆಗಳಲ್ಲಿ ಮನೆ ಕಳೆದುಕೊಂಡರಿಗೆ ಪ್ರಧಾನಿ ಅವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು. ಮಳೆ ಅವಾಂತರದಿಂದ ಕೊಡಗು ಜಿಲ್ಲೆ ಜಲ ಪ್ರಳಯದಿಂದ ನಮ್ಮ ಶಾಸಕರು ಹಾಗೂ ಸಂಸದರು ಸ್ಥಳದಲ್ಲಿಯೇ ಇದ್ದಾರೆ ಎಂದು ತಿಳಿಸಿದರು.
									
											
							                     
							
							
			        							
								
																	ಸ್ಥಳೀಯ ಚುನಾವಣೆ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇಲ್ಲ. ಅರವಿಂದ ಲಿಂಬವಾಳಿ ನೇತೃತ್ವದಲ್ಲಿ ಅಭ್ಯರ್ಥಿಗಳ ಅಯ್ಕೆ ಪ್ರಕ್ರಿಯೆ ನೆಡೆಯುತ್ತಿದೆ. ಕುರುಬ ಸಮುದಾಯ ಸೇರಿದಂತೆ ಎಲ್ಲ ವರ್ಗದವರಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದರು.