Select Your Language

Notifications

webdunia
webdunia
webdunia
Thursday, 3 April 2025
webdunia

ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದ ಬಿಎಸ್‍ವೈ

ಯಡಿಯೂರಪ್ಪ
ಬೆಳಗಾವಿ , ಬುಧವಾರ, 13 ಏಪ್ರಿಲ್ 2022 (09:55 IST)
ಬೆಳಗಾವಿ : ಸಚಿವ ಕೆ.ಎಸ್ ಈಶ್ವರಪ್ಪ ಅವರು ನನಗೆ ಏನೂ ಸಂಬಂಧ ಇಲ್ಲ ಎಂದು ಈಗಾಗಲೇ ಹೇಳಿದ್ದಾರೆ.
 
ಹೀಗಾಗಿ ನಾನು ಸಂತೋಷ್ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಹೀಗಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.

ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಕ್ಕೆ ಮಾತನಾಡಿದ ಅವರು, ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಈಶ್ವರಪ್ಪ ನನಗೆ ಏನೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ತನಿಖೆ ಮಾಡಿಸುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ. ತನಿಖೆ ವರದಿ ಬಂದ ಬಳಿಕ ವಾಸ್ತವ ಹೊರಬರಲಿದೆ. ನಾನು ಕೂಡ ಸಿಎಂ ಜೊತೆಗೆ ಮಾತನಾಡಿದ್ದೇನೆ. ಸಿಎಂ ಕೂಡ ತನಿಖೆ ಆಧರಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.    

Share this Story:

Follow Webdunia kannada

ಮುಂದಿನ ಸುದ್ದಿ

ಹಲ್ಲೆ ನಡೆಸಿ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ