Publish Date: Wed, 14 Mar 2018 (10:06 IST)
Updated Date: Wed, 14 Mar 2018 (10:08 IST)
ಬೆಂಗಳೂರು: ಐಪಿಎಸ್ ಅಧಿಕಾರಿಗಳಿಗೆ ರಾಜ್ಯದಲ್ಲಿ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಅಧಿಕಾರಿ ಆರ್ ಪಿ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚಿಸಿರುವುದರ ವಿರುದ್ಧ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ.
‘ಸಮಸ್ಯೆ ಹೇಳಿಕೊಂಡು ಬಂದ ಅಧಿಕಾರಿಯ ಸಮಸ್ಯೆ ಆಲಿಸುವ ಬದಲು ಅವರಿಗೇ ಶಿಕ್ಷೆ ನೀಡಿ ಬಾಯಿ ಮುಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರ ಕಮಿಷನ್ ಸರ್ಕಾರ ಯತ್ನಿಸುತ್ತಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.
ಯಾವುದೇ ಸ್ಥಳದಲ್ಲಿ ಅನ್ಯಾಯ ನಡೆಯುತ್ತಿದ್ದರೂ ಅದು ನ್ಯಾಯಕ್ಕೆ ಇರುವ ಬೆದರಿಕೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ